ಮಣಿಪಾಲ: ದಿನಾಂಕ 15/05/2024 (ಹಾಯ್ ಉಡುಪಿ ನ್ಯೂಸ್) ಲಕ್ಷ್ಮೀಂದ್ರ ನಗರ ಪರಿಸರದಲ್ಲಿ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ದೇವರಾಜ್ ಟಿ.ವಿ, ಅವರು ಬಂಧಿಸಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ದೇವರಾಜ್ ಟಿವಿ ಅವರಿಗೆ ದಿನಾಂಕ: 14-05-2024 ರಂದು ಶಿವಳ್ಳಿ ಗ್ರಾಮದ ಲಕ್ಷ್ಮೀಂದ್ರನಗರ 2 ನೇ ಅಡ್ಡ ರಸ್ತೆಯ ಅಟೀಲು ಅಪಾರ್ಟ್ ಮೆಂಟ್ ಹತ್ತಿರ ಇಬ್ಬರು ವ್ಯಕ್ತಿಗಳು ಬಿಳಿ ಬಣ್ಣದ ಸ್ಕೂಟರ್ ನಲ್ಲಿ ಬಂದು ಮಾದಕ ದ್ರವ್ಯ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಮಾಹಿತಿ ದಾರರಿಂದ ಖಚಿತ ಮಾಹಿತಿ ಬಂದಿದ್ದು ಕೂಡಲೇ ಸ್ಥಳಕ್ಕೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕಲಂ: 20 (b) ಎನ್.ಡಿ.ಪಿ.ಎಸ್ ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.