- ಕೋಟ: ದಿನಾಂಕ 27/05/2024 (ಹಾಯ್ ಉಡುಪಿ ನ್ಯೂಸ್) ಹರ್ಕಾಡಿ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ಜುಗಾರಿ ನಡೆಸುತ್ತಿದ್ದಲ್ಲಿಗೆ ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ತೇಜಸ್ವಿ ಟಿ ಐಯವರು ದಾಳಿ ನಡೆಸಿದ್ದಾರೆ.
- ಕೋಟ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ (ಕಾ&ಸು) ತೇಜಸ್ವಿ ಟಿ.ಐ ಯವರಿಗೆ ದಿನಾಂಕ:26-05-2024 ರಂದು ಸಂಜೆ ಕೋಟ ಠಾಣಾ ವ್ಯಾಪ್ತಿಯ ಕುಂದಾಪುರ ತಾಲೂಕು ಹಳ್ಳಾಡಿ ಹರ್ಕಾಡಿ ಗ್ರಾಮದ ಗಾವಳಿ ಬ್ರಹ್ಮಸ್ಥಾನ ದೇವಸ್ಥಾನದ ಬಳಿ ಹಾಡಿಯಲ್ಲಿ ಹಲವಾರು ಜನ ಸೇರಿಕೊಂಡು ಕೋಳಿಗಳನ್ನು ಹಿಂಸಾತ್ಮಕವಾಗಿ ಅವುಗಳ ಕಾಲಿಗೆ ಕತ್ತಿಯನ್ನು ಕಟ್ಟಿ ಮನೋರಂಜನೆಗಾಗಿ ಹಾಗೂ ಜೂಜಾಟಕ್ಕಾಗಿ ಕೋಳಿ ಅಂಕವನ್ನು ಆಡುತ್ತಿದ್ದಾರೆ ಎಂಬುವುದಾಗಿ ಸಾರ್ವಜನಿಕ ರಿಂದ ಬಂದ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.
- ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಕಲಂ: 87, 93 KP ACT and 11 Cruelty to Animal Act 1960 ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.