ಮಣಿಪಾಲ: ದಿನಾಂಕ : 06/06/2024 (ಹಾಯ್ ಉಡುಪಿ ನ್ಯೂಸ್) ಈಶ್ವರ ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿ ಯನ್ನು ಮಣಿಪಾಲ ಪೊಲೀಸ್ ಠಾಣೆಯ ನಿರೀಕ್ಷಕರಾದ ದೇವರಾಜ್ ಟಿ.ವಿ ಅವರು ಬಂಧಿಸಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕರಾದ ದೇವರಾಜ್ ಟಿವಿ ಅವರಿಗೆ ದಿನಾಂಕ:05-06-2024 ರಂದು ಮಣಿಪಾಲ ಹೆರ್ಗಾ ಗ್ರಾಮದ ಈಶ್ವರನಗರ ದಲ್ಲಿರುವ ಮಾಂಡವಿ ಪ್ಯಾಲೇಸ್ ಅಪಾರ್ಟಮೆಂಟ್ “ಎ” ಬ್ಲಾಕ್ ರೂಮ್ ನಂಬರ್ 304 ರಲ್ಲಿ ಓರ್ವ ವ್ಯಕ್ತಿ ಮಾದಕ ವಸ್ತು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದಾನೆ ಎಂದು ಗುಪ್ತ ಮಾಹಿತಿ ಬಂದಿದ್ದು ಆ ಕೂಡಲೇ ಸ್ಥಳಕ್ಕೆ ದಾಳಿ ನಡೆಸಿ ವ್ಯಕ್ತಿ ಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕಲಂ: 20 (b) ಎನ್.ಡಿ.ಪಿ.ಎಸ್ ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ