- ಮಣಿಪಾಲ: ದಿನಾಂಕ : 07/06/2024 (ಹಾಯ್ ಉಡುಪಿ ನ್ಯೂಸ್) ಈಶ್ವರ ನಗರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ಮೂವರು ಯುವಕರ ನ್ನು ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ರಾಘವೇಂದ್ರ ಸಿ ಅವರು ಬಂಧಿಸಿದ್ದಾರೆ.
- ಮಣಿಪಾಲ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ರಾಘವೇಂದ್ರ ಸಿ ರವರು ದಿನಾಂಕ: 05-06-2024 ರಂದು ಶಿವಳ್ಳಿ ಗ್ರಾಮದ ಈಶ್ವರ ನಗರದ ಸಾರ್ವಜನಿಕ ಸ್ಥಳದಲ್ಲಿ ರೌಂಡ್ಸ್‌ಕರ್ತವ್ಯದಲ್ಲಿರುವಾಗ ಜೀವಾ(22), ಲಕ್ಷ್ಮಣ (21) , ನಿರ್ಗುಣ (20) ಎಂಬವರು ಅಮಲಿನಲ್ಲಿದ್ದು, ಈ ಮೂವರೂ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಅನುಮಾನದ ಮೇರೆಗೆ ಬಂಧಿಸಿ ದ್ದಾರೆ.
- ಈ ಮೂವರೂ ಆಪಾದಿತರು ಗಾಂಜಾ ಸೇವನೆ ಮಾಡಿರುವ ಬಗ್ಗೆ ಧ್ರಡ ಪಡಿಸಲುಮಣಿಪಾಲ ಕೆ ಎಂ ಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ ಎನ್ನಲಾಗಿದೆ .
- ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕಲಂ: 27 (b) NDPS act ರಂತೆ ಪ್ರಕರಣ ದಾಖಲಾಗಿದೆ.