ಶಿರ್ವ: ದಿನಾಂಕ:09-06-2024(ಹಾಯ್ ಉಡುಪಿ ನ್ಯೂಸ್) ಬೆಳಪು ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿ ಯನ್ನು ಶಿರ್ವ ಪೊಲೀಸ್ ಠಾಣೆಯ ಪಿಎಸ್‌ಐ, (ಕಾ & ಸು) ಯವರಾದ ಸಕ್ತಿವೇಲು ಇ ಅವರು ಬಂಧಿಸಿದ್ದಾರೆ.
ಶಿರ್ವ ಪೊಲೀಸ್ ಠಾಣೆಯ ಪಿಎಸ್ಐ ಯವರಾದ ಸಕ್ತಿವೇಲು ಇ ರವರು ದಿನಾಂಕ : 05.06.2024 ರಂದು ಬೆಳಿಗ್ಗೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಕಾಪು ತಾಲೂಕು ಬೆಳಪು ಗ್ರಾಮದ ಸ್ಟಡಿ ಸರ್ಕಲ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಕಲಂದರ್ ಯಾನೆ ಮೊಹಮ್ಮದ್ ಎಂಬವನನ್ನು ಮಾದಕ ವಸ್ತು ಗಾಂಜಾವನ್ನು ಸಿಗರೇಟ್‌ನಲ್ಲಿ ಸೇರಿಸಿ ಸೇದುತ್ತಿದ್ದವನನ್ನು ಬಂಧಿಸಿ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಆಪಾದಿತ ಕಲಂದರ್ ನು ಗಾಂಜಾ ಮಾದಕ ವಸ್ತು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ವರದಿ ದಿನಾಂಕ: 08.06.2024 ರಂದು ಬಂದಿದೆ ಎನ್ನಲಾಗಿದೆ.
ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಕಲಂ 27(b) NDPS ACT ರಂತೆ ಪ್ರಕರಣ ದಾಖಲಾಗಿದೆ.