ಗಂಗೊಳ್ಳಿ: ದಿನಾಂಕ : 17-06-2024(ಹಾಯ್ ಉಡುಪಿ ನ್ಯೂಸ್) ಆಲೂರು ಹಳ್ಳಿ ದೇವಸ್ಥಾನ ಕ್ರಾಸ್ ರಸ್ತೆ ಬಳಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿ ಯನ್ನು ಗಂಗೊಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಯವರಾದ ಬಸವರಾಜ ಕನಶೆಟ್ಟಿ ಅವರು ಬಂಧಿಸಿದ್ದಾರೆ.
ಗಂಗೊಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಯವರಾದ ಬಸವರಾಜ ಕನಶೆಟ್ಟಿ ರವರು ದಿನಾಂಕ 16/06/2024 ರಂದು ರೌಂಡ್ಸ್ ಕರ್ತವ್ಯದಲ್ಲಿರುವಾಗ ಕುಂದಾಪುರ ತಾಲೂಕು ಆಲೂರು ಹಳ್ಳಿ ದೇವಸ್ಥಾನದ ಕ್ರಾಸ್ ರಸ್ತೆ ಬಳಿ ಇರುವ ಗೋಳಿಮರದ ಬಳಿ ಸಾರ್ವಜನಿಕ ಸ್ಥಳದಲ್ಲಿ ಶಂಕರ ಎಂಬುವವರು ಮಟ್ಕಾ ಜುಗಾರಿ ನಡೆಸುತ್ತಿದ್ದ ಬಗ್ಗೆ ಗಂಗೊಳ್ಳಿ ಗ್ರಾಮದ ಬೀಟ್ ಸಿಬ್ಬಂದಿ ನೀಡಿದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ದಾಳಿ ನಡೆಸಿ ಮಟ್ಕಾ ಜುಗಾರಿ ನಡೆಸುತ್ತಿದ್ದ ಶಂಕರ (51) ವರ್ಷ, ಆಲೂರು ಗ್ರಾಮ ಕುಂದಾಪುರ ತಾಲೂಕು ಎಂಬವನನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಆತನನ್ನು ವಿಚಾರಣೆ ನಡೆಸಿದಾಗ ತಾನು ಸ್ವಂತ ಲಾಭಕ್ಕೋಸ್ಕರ ಮಟ್ಕಾ ಚೀಟಿ ಬರೆಯುತ್ತಿರುವುದಾಗಿ ತಿಳಿಸಿದ್ದು, ಮಟ್ಕಾ ಜುಗಾರಿಗೆ ಬಳಸಿದ ಮಟ್ಕಾ ಚೀಟಿ-1, ಬಾಲ್ ಪೆನ್ನು-1 ಹಾಗೂ 2,290/-ರೂ ನಗದನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಕಲಂ:78(I),78(III) ಕರ್ನಾಟಕ ಪೊಲೀಸ್ ಕಾಯ್ದೆ 2021 ರಂತೆ ಪ್ರಕರಣ ದಾಖಲಾಗಿದೆ.