ಬೆಂಗಳೂರು: ದಿನಾಂಕ:18-06-2024(ಹಾಯ್ ಉಡುಪಿ ನ್ಯೂಸ್) ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿಗೆ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಇಂದು ಪುನಃ 14 ದಿನಗಳಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಆ ಮೂಲಕ ಪೊಲೀಸರು ಪ್ರಜ್ವಲ್ ರೇವಣ್ಣ ನನ್ನು ಇಂದು ಪರಪ್ಪನ ಅಗ್ರಹಾರ ಜೈಲು ಸೇರಿಸಿದ್ದಾರೆ.