- ಮಣಿಪಾಲ: ದಿನಾಂಕ 19/06/2024 (ಹಾಯ್ ಉಡುಪಿ ನ್ಯೂಸ್) ಸಂತೋಷ್ ನಗರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಅಮಲಿನಲ್ಲಿದ್ದ ಇಬ್ಬರು ಯುವಕರನ್ನು ಮಣಿಪಾಲ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ರಾಘವೇಂದ್ರ ಸಿ ಅವರು ಬಂಧಿಸಿದ್ದಾರೆ.
- ಮಣಿಪಾಲ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ರಾಘವೇಂದ್ರ. ಸಿ ರವರು ದಿನಾಂಕ:14-06-2024 ರಂದು ಶಿವಳ್ಳಿ ಗ್ರಾಮದ ಸಂತೋಷ್ ನಗರದ ಬಳಿ ಸಾರ್ವಜನಿಕ ಸ್ಥಳದಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಜ್ಞಾನೇಶ್ (25) ಮತ್ತು ಮಂಜುನಾಥ (25) ಎಂಬ ಇಬ್ಬರು ಯುವಕರು ಸಾರ್ವಜನಿಕ ಸ್ಥಳದಲ್ಲಿ ಅಮಲಿನಲ್ಲಿದ್ದು ಅವರೀರ್ವರು ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಅನುಮಾನದ ಮೇರೆಗೆ ಅವರನ್ನು ಬಂಧಿಸಿ ವಶಕ್ಕೆ ಪಡೆದು ಅವರನ್ನು ವೈದ್ಯಕೀಯ ಪರೀಕ್ಷೆ ನಡೆಸಲು ಮಣಿಪಾಲ ಕೆಎಂಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದಾರೆ.
- ವೈದ್ಯಕೀಯ ಪರೀಕ್ಷೆಯಲ್ಲಿ ಆರೋಪಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ ಎನ್ನಲಾಗಿದೆ.
- ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕಲಂ: 27 (b) NDPS act ರಂತೆ ಪ್ರಕರಣ ದಾಖಲಾಗಿದೆ.