Spread the love

ಬೆಂಗಳೂರು: ದಿನಾಂಕ:  20-06-2024(ಹಾಯ್ ಉಡುಪಿ ನ್ಯೂಸ್) ಭ್ರೂಣ ಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದವರಿಗೆ ಆರೋಗ್ಯ ಇಲಾಖೆಯಿಂದ ನೀಡುವ ಬಹುಮಾನದ ಮೊತ್ತವನ್ನು 50 ಸಾವಿರ ರೂಪಾಯಿಯಿಂದ 1 ಲಕ್ಷ ರೂಪಾಯಿಗೆ ಏರಿಕೆ ಮಾಡಿ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

2023 ಡಿ.11ರಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮೇಲ್ವಿಚಾರಣಾ ಮಂಡಳಿ ಸಭೆಯಲ್ಲಿ ಬಹುಮಾನದ ಮೊತ್ತವನ್ನು ಏರಿಸಲು ನಿರ್ಧರಿಸಲಾಗಿತ್ತು ಎಂದು ಹೇಳಲಾಗಿದೆ.

ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಕಾಯ್ದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಶಸ್ವಿಗೊಂಡ ಗುಪ್ತ ಕಾರ್ಯಾಚರಣೆಯಲ್ಲಿ ಮಾಹಿತಿ ನೀಡಿದವರಿಗೆ ಈ ಬಹುಮಾನ ನೀಡಲಾಗುವುದು. ಬಹುಮಾನದ ಮೊತ್ತದಲ್ಲಿ  50 ಸಾವಿರವನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದಲೂ,ಇನ್ನುಳಿದ 50 ಸಾವಿರ ಮೊತ್ತ ವನ್ನು ಆಯಾ ಜಿಲ್ಲೆಗಳಲ್ಲಿ ಸಂಗ್ರಹವಾಗಿರುವ ಪಿಸಿಪಿಎನ್ ಡಿಟಿ ಶುಲ್ಕದಿಂದ ಭರಿಸಬೇಕು ಎಂದು ತಿಳಿಸಲಾಗಿದೆ.

error: No Copying!