ಕಾರ್ಕಳ: ದಿನಾಂಕ:22-06-2024(ಹಾಯ್ ಉಡುಪಿ ನ್ಯೂಸ್) ಪರುಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಕಂಚಿನ ಮೂರ್ತಿ ಯನ್ನು ಸ್ಥಾಪಿಸಿ ಸರ್ಕಾರಕ್ಕೆ ವಂಚನೆ ಮಾಡಲಾಗಿದೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.
ಆರೋಪಿ ಕೃಷ್ಣ ಎಂಬವನು Krish Art World ಎಂಬ ಸಂಸ್ಥೆಯ ಮುಖಾಂತರ ಕಾರ್ಕಳ ತಾಲೂಕಿನ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಕಂಚಿನ ಪರುಶುರಾಮ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1,25,50000/- ಹಣ ಪಡೆದುಕೊಂಡು ಕಾಮಗಾರಿ ನಡೆಸುತ್ತಿದ್ದು, ನಂತರ ಆರೋಪಿ ಕ್ರಷ್ಣನು ಕಂಚಿನ ಮೂರ್ತಿಯನ್ನು ಮಾಡದೇ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆಯನ್ನು ಮಾಡಿದ್ದಾನೆ ಎಂದು ಕಾರ್ಕಳ , ನಲ್ಲೂರು ಗ್ರಾಮದ ನಿವಾಸಿ ಕ್ರಷ್ಣ (30) ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.
ಕ್ರಷ್ಣ ರವರು ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 420, 409 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.