ಉಡುಪಿ: ದಿನಾಂಕ:29-06-2024 (ಹಾಯ್ ಉಡುಪಿ ನ್ಯೂಸ್) ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಯುವಕನನ್ನು ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್ ಅವರು ಬಂಧಿಸಿದ್ದಾರೆ.
ದಿನಾಂಕ:28.06.2024 ರಂದು ಉಡುಪಿ , ಮೂಡ ನಿಡಂಬೂರು ಗ್ರಾಮದ ಮೀನು ಮಾರುಕಟ್ಟೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮೇಲ್ನೋಟಕ್ಕೆ ಮಾದಕ ವಸ್ತುವನ್ನು ಸೇವಿಸಿರುವಂತೆ ಅನುಮಾನಾಸ್ಪದವಾಗಿ ಕಂಡು ಬಂದ ಉಡುಪಿ,ಉದ್ಯಾವರದ ನಿವಾಸಿ ದೀಪಕ್ (24) ಎಂಬವನನ್ನು ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್ ಅವರು ಬಂಧಿಸಿ ವಶಕ್ಕೆ ಪಡೆದು ಅವನನ್ನು ಮೆಡಿಕಲ್ ತಪಾಸಣೆ ಗೊಳಪಡಿಸಿದ್ದು , ದಿನಾಂಕ: 29.06.2024 ರಂದು ಮಣಿಪಾಲ ಕೆ.ಎಂ.ಸಿ. ಫಾರೆನ್ಸಿಕ್ ವಿಭಾಗದಿಂದ ಬಂದಿರುವ ತಜ್ಞ ರ ವರದಿಯಲ್ಲಿ ಆರೋಪಿ ದೀಪಕ್ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎನ್ನಲಾಗಿದೆ.
ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕಲಂ 27 (b) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.