ಕಾರ್ಕಳ: ದಿನಾಂಕ: 30-06-2024(ಹಾಯ್ ಉಡುಪಿ ನ್ಯೂಸ್)
ಇಲ್ಲಿನ ಮುಂಡ್ಕೂರು ಗ್ರಾಮದಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಮನೆ ಹಾಗೂ ಮನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲಾಗಿದೆ.
ಮುಂಡ್ಕೂರು ಗ್ರಾಮದ ಹಳೆಮನೆ ಪುರುಷೋತ್ತಮ ಶೆಟ್ಟಿ ಎಂಬವರ ಮನೆ ಇದಾಗಿದ್ದು ಮನೆಯಲ್ಲಿದ್ದ ಬೆಲೆ ಬಾಳುವ ವಸ್ತುಗಳೆಲ್ಲ ಸುಟ್ಟು ಕರಕಲಾಗಿದೆ.ಅಂದಾಜು 5 ಲಕ್ಷಕ್ಕೂ ಹೆಚ್ಚಿನ ಮೊತ್ತದ ನಷ್ಟ ಉಂಟಾಗಿದೆ ಎನ್ನಲಾಗಿದೆ.
ಅದ್ರಷ್ಟವಶಾತ್ ಯಾವುದೇ ಜೀವ ಹಾನಿಯಾಗಿಲ್ಲ.
ಈ ದುರ್ಘಟನೆಯಿಂದ ನೊಂದವರಿಗೆ ಕೂಡಲೇ ಸೂಕ್ತ ಪರಿಹಾರವನ್ನು ಒದಗಿಸ ಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಪ್ರಮುಖರಾದ ಸಂತೋಷ್ ರವರು ಜನಪ್ರತಿನಿಧಿಗಳನ್ನು ಹಾಗೂ ಪಂಚಾಯತ್ ಅಧಿಕಾರಿಗಳಲ್ಲಿ ಆಗ್ರಹಿಸಿದ್ದಾರೆ.