Spread the love

ದಿನಾಂಕ :04-07-2024(ಹಾಯ್ ಉಡುಪಿ ನ್ಯೂಸ್) ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ರಾಜ್ಯದಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ರಾಜ್ಯದ ಎಲ್ಲಾ ಜಿಲ್ಲಾ ಮತ್ತು ಕೇಂದ್ರಗಳಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಉಡುಪಿಯಲ್ಲಿ ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರವೇ ಅಧ್ಯಕ್ಷರಾದ  ಸುಜಯ್ ಪೂಜಾರಿ ಅವರ ನೇತೃತ್ವದಲ್ಲಿ ಸೇರಿದ ಹಲವಾರು ಕಾರ್ಯಕರ್ತರು ಕನ್ನಡ ನಾಡಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಎಲ್ಲಾ ಹಂತದ ಉದ್ಯೋಗಗಳನ್ನು ಕನ್ನಡಿಗರಿಗೆ ನೀಡುವಂತೆ ಸೂಕ್ತ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾ ಅಧ್ಯಕ್ಷರಾದ ಶ್ರೀಯುತ ನೀಲಾವರ ಸುರೇಂದ್ರ ಆಡಿಗ ರವರು ಕನ್ನಡಪರ ಹೋರಾಟಕ್ಕೆ ಬೆಂಬಲವನ್ನು ನೀಡಿ ಈ ಹೋರಾಟದಲ್ಲಿ ಕೈಜೋಡಿಸಿದರು. ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಉಡುಪಿಯತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ ಖಾಸಗಿ ವಲಯಗಳಲ್ಲಿ ಕನ್ನಡಿಗಯೇತರರಿಗೆ ಹೆಚ್ಚಿನ ಉದ್ಯೋಗಾವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ವಲಯದಲ್ಲಿ ಸಿ. ಮತ್ತು ಡಿ.ದರ್ಜೆಯ ಹುದ್ದೆಗಳಲ್ಲಿ ಶೇಕಡ 100%ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಇತರೆ ಗ್ರೂಪ್ ಗಳಲ್ಲಿ 80ರಷ್ಟು ಮೀಸಲಾತಿ ನೀಡುವಂತೆ ಮಾನ್ಯ ಜಿಲ್ಲಾಧಿಕಾರಿಗಳಿಗೆ ಕರವೇಯ ಎಲ್ಲಾ ಕಾರ್ಯಕರ್ತರು ಮನವಿಯನ್ನು ಸಲ್ಲಿಸಿದರು. ಈ ಧರಣಿ ಸತ್ಯಾಗ್ರಹದಲ್ಲಿ ಉಡುಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುಜಯ್ ಪೂಜಾರಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಶ್ರೀಮತಿ ಗೀತಾ ಪಾಂಗಾಳ, ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಶ್ರೀ ಸಂತೋಷ್ ಕುಲಾಲ್ . ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ಸಿದ್ದಣ್ಣ ಪೂಜಾರಿ ಹಾಗೂ ಶ್ರೀ ಗಣೇಶ್ ಎಸ್. ಸಂಘಟನಾ ಕಾರ್ಯದರ್ಶಿಗಳಾದ ಗೋಪಾಲ್ ದೊರೆ ಮತ್ತು ಆಲ್ಫೋನ್ಸ್. ಸಾಂಸ್ಕೃತಿಕ ಕಾರ್ಯದರ್ಶಿಯಾದ ಶ್ರೀ ಕೃಷ್ಣಪಾಂಗಾಳ ಜಿಲ್ಲಾ ಮಹಿಳಾ ಉಪಾಧ್ಯಕ್ಷರಾದ ಶ್ರೀಮತಿ ದೇವಕಿ ಬಾರ್ಕೂರು ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿಯಾದ ಶ್ರೀಮತಿ ಜ್ಯೋತಿ ಮಹಿಳಾ ಕಾರ್ಯದರ್ಶಿಯಾದ ಶ್ರೀಮತಿ ಮೋಹಿನಿ ಹಾಗೂ ಶ್ರೀಮತಿ ಚಂದ್ರಕಲಾ ಸಾಂಸ್ಕೃತಿಕ ಕಾರ್ಯದರ್ಶಿಯಾದ ಶ್ರೀಮತಿ ಆಶಾ ಕಾಪು ತಾಲೂಕು ಮಹಿಳಾ ಅಧ್ಯಕ್ಷರಾದ ಶಶಿಕಲಾ ನವೀನ್ ಕಾಪು ತಾಲೂಕು ಮಹಿಳಾ ಪ್ರಧಾನ ಕಾರ್ಯದರ್ಶಿಯಾದ ಶ್ರೀಮತಿ ಅನಿಕ ಕಾಪು ತಾಲೂಕು ಕಾರ್ಯದರ್ಶಿಯಾದ ಶ್ರೀಮತಿ ಗೀತಾ ಜಿಲ್ಲಾ ಸದಸ್ಯರಾದ ಶ್ರೀ ಯೋಗೇಶ್ ಕೋಟ್ಯಾನ್ ಸುಂದರ ಹಾಗೂ ಮಹಿಳಾ ಜಿಲ್ಲಾ ಸದಸ್ಯರಾದ ಶ್ರೀಮತಿ ಸುನೀತಾ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು.

error: No Copying!