ಉಡುಪಿ: ದಿನಾಂಕ; 08-07-2024( ಹಾಯ್ ಉಡುಪಿ ನ್ಯೂಸ್) ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ದಿನಾಂಕ:08-07-2024 ರ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ದಿನಾಂಕ : 09-07-2024 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲಾಧಿಕಾರಿಯವರು ರಜೆಯನ್ನು ಘೋಷಿಸಿದ್ದಾರೆ.