ಗಂಗೊಳ್ಳಿ: ದಿನಾಂಕ:12-07-2024 (ಹಾಯ್ ಉಡುಪಿ ನ್ಯೂಸ್) ಗಂಗೊಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಟ್ಕಾ ಜುಗಾರಿ ಬರೆಯುತ್ತಿದ್ದ ವ್ಯಕ್ತಿಯನ್ನು ಗಂಗೊಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಬಸವರಾಜ ಕನಶೆಟ್ಟಿ ಯವರು ಬಂಧಿಸಿದ್ದಾರೆ.
ಗಂಗೊಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಬಸವರಾಜ ಕನಶೆಟ್ಟಿ ಅವರು ದಿನಾಂಕ : 11/07/2024 ರಂದು ರೌಂಡ್ಸ್ ಕರ್ತವ್ಯದಲ್ಲಿರುವಾಗ ಕುಂದಾಪುರ ತಾಲೂಕು ತ್ರಾಸಿ ಗ್ರಾಮದ ಹೊಸಪೇಟೆ ಕ್ರಾಸ್ ನಿಂದ ಸ್ವಲ್ಪ ದೂರದಲ್ಲಿ ಇರುವ ಮರದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಧುಕರ ಮೇಸ್ತ ಎಂಬುವವನು ಮಟ್ಕಾ ಜುಗಾರಿ ನಡೆಸುತ್ತಿರುವ ಬಗ್ಗೆ ತ್ರಾಸಿ ಗ್ರಾಮದ ಬೀಟ್ ಸಿಬ್ಬಂದಿ ನೀಡಿದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಅಲ್ಲಿಗೆ ದಾಳಿ ನಡೆಸಿದ್ದಾರೆ .
ಮಟ್ಕಾ ಜುಗಾರಿ ನಡೆಸುತ್ತಿದ್ದ ಗುಜ್ಜಾಡಿ ಗ್ರಾಮದ ನಿವಾಸಿ ಮಧುಕರ ಮೇಸ್ತ (48) ಎಂಬವನನ್ನು ಬಂಧಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಾನು ಸ್ವಂತ ಲಾಭಕ್ಕೋಸ್ಕರ ಮಟ್ಕಾ ಚೀಟಿ ಬರೆಯುತ್ತಿರುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ.
ಆತ ಮಟ್ಕಾ ಜುಗಾರಿಗೆ ಬಳಸಿದ ಮಟ್ಕಾ ಚೀಟಿ-1, ಬಾಲ್ ಪೆನ್ನು-1 ಹಾಗೂ 1985/-ರೂ ನಗದನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ .
ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಕಲಂ:78(I),78(III) ಕರ್ನಾಟಕ ಪೊಲೀಸ್ ಕಾಯ್ದೆ 2021 ರಂತೆ ಪ್ರಕರಣ ದಾಖಲಾಗಿದೆ.