Spread the love
  • ಮಣಿಪಾಲ: ದಿನಾಂಕ: 18-07-2024 (ಹಾಯ್ ಉಡುಪಿ ನ್ಯೂಸ್) ಮಣ್ಣಪಲ್ಲ ಕೆರೆಯ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ಇಬ್ಬರು ಯುವಕರನ್ನು ಸೆನ್ ಅಪರಾಧ ಪೊಲೀಸ್‌ ಠಾಣೆಯ ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್ ಅವರು ಬಂಧಿಸಿದ್ದಾರೆ.
  • ದಿನಾಂಕ 16/07/2024 ರಂದು ಉಡುಪಿ, ಶಿವಳ್ಳಿ ಗ್ರಾಮದ ,ಮಣಿಪಾಲ ಮಣ್ಣಪಳ್ಳ ಕೆರೆಯ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮೇಲ್ನೋಟಕ್ಕೆ ಮಾದಕಣ ವಸ್ತುವನ್ನು ಸೇವಿಸಿರುವಂತೆ ಕಂಡು ಬಂದ ವಿನೋದ್‌ (22) ಹಾಗೂ  ಗುರುಕಿರಣ್ (21) ಎಂಬವರನ್ನು  ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್ ಅವರು ಬಂಧಿಸಿ ವಶಕ್ಕೆ ಪಡೆದು ಮೆಡಿಕಲ್ ತಪಾಸಣೆಗೊಳಪಡಿಸಿದ್ದಾರೆ.
  • ದಿನಾಂಕ 17/07/2024 ರಂದು ಮಣಿಪಾಲ ಕೆ.ಎಂ.ಸಿ. ಫಾರೆನ್ಸಿಕ್ ವಿಭಾಗದಿಂದ ಬಂದಿರುವ ತಜ್ಞರ  ವರದಿಯಲ್ಲಿ ಆರೋಪಿಯು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎನ್ನಲಾಗಿದೆ.
  • ಈ ಬಗ್ಗೆ ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ 53/ 2024 ಕಲಂ: 27 (b) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.
error: No Copying!