ಕೋಟ: ದಿನಾಂಕ: 22-07-2024(ಹಾಯ್ ಉಡುಪಿ ನ್ಯೂಸ್) ತವರು ಮನೆಯಲ್ಲಿದ್ದ ಪತ್ನಿಗೆ ಗಂಡ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾನೆ ಎಂದು ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.
ಕುಂದಾಪುರ , ತೆಕ್ಕಟ್ಟೆ ಗ್ರಾಮದ ನಿವಾಸಿ ಲತಾ (35) ಎಂಬವರು ವಸಂತ ಎಂಬುವವರನ್ನು 16 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಗಂಡನ ಮನೆಯಾದ ಕುಂದಾಪುರದ ಆನಗಳ್ಳಿ ಯಲ್ಲಿ ವಾಸವಾಗಿದ್ದರು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿ ಗಂಡ ವಸಂತನು ಯಾವಾಗಲೂ ಕುಡಿದು ಬಂದು ಲತಾರವರೊಂದಿಗೆ ಗಲಾಟೆ ಮಾಡುತ್ತಿದ್ದು, ಇದರಿಂದ ಬೇಸರಗೊಂಡು ಲತಾರವರು 2 ವರ್ಷಗಳಿಂದ ತನ್ನ ತಾಯಿ ಮನೆಯಾದ ತೆಕ್ಕಟ್ಟೆಯಲ್ಲಿ ವಾಸವಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ದಿನಾಂಕ : 20/07/2024 ರಂದು ರಾತ್ರಿ ಆರೋಪಿ ಗಂಡ ವಸಂತನು ಪತ್ನಿ ಯ ಮನೆಗೆ ಬಂದು ಲತಾರವರನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ಬೈದು, ಲತಾರವರನ್ನು ಮನೆಯಿಂದ ಹೊರಗೆ ಎಳೆದು ತಂದು ಕೈಯಿಂದ ಹೊಡೆದು ಹಲ್ಲೆ ಮಾಡಿರುವುದಲ್ಲದೇ ಮಾನಸಿಕ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿ ಹೋಗಿದ್ದಾನೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಲತಾರವರು ನೀಡಿದ ದೂರಿನಂತೆ ಕೋಟ ಪೊಲೀಸ್ ಠಾಣೆಯಲ್ಲಿ ಕಲಂ: 85, 115(2), 352, 351(2) BNS ರಂತೆ ಪ್ರಕರಣ ದಾಖಲಾಗಿದೆ.