ಉಡುಪಿ: ದಿನಾಂಕ:24-07-2024 (ಹಾಯ್ ಉಡುಪಿ ನ್ಯೂಸ್) ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಹಲವು ಮೂಲಭೂತ ಸಮಸ್ಯೆಗಳಿದ್ದು ಅವುಗಳನ್ನು ಕೂಡಲೇ ಬಗೆಹರಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಅವರು ರೈಲ್ವೆ ಅಧಿಕಾರಿಗಳಿಗೆ ದಿನಾಂಕ : 22-07-2024 ರಂದು ಸಂಘಟನೆಯ ಪದಾಧಿಕಾರಿಗಳೊಂದಿಗೆ ಮಾಹಿತಿ ನೀಡಿದರು. ರೈಲ್ವೆ ನಿಲ್ದಾಣದಲ್ಲಿ ಯಾವುದೇ ಕನ್ನಡ ನಾಮಫಲಕ ಇಲ್ಲ, ಇದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ ಮತ್ತು ಸಾರ್ವಜನಿಕರಿಗೆ ಸರಿಯಾದ ಮಾಹಿತಿ ಸಿಗುವುದಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ರೈಲ್ವೆ ನಿಲ್ದಾಣದಲ್ಲಿ ಈ ದಿನಗಳಲ್ಲಿ ಹಲವು ನಾಯಿಗಳು ಕಾಟ ನೀಡುತ್ತಿವೆ .ವರ್ಷಗಳಿಂದ ಅಲ್ಲೇ ಬಿಡಾರ ಹೂಡಿದ್ದು ಅವುಗಳು ಮಕ್ಕಳಿಗೆ ವಯೋವೃದ್ಧರಿಗೆ ಕಚ್ಚುವ ಸಂಭವವಿದೆ ಮತ್ತು ಪ್ರಯಾಣಿಕರು ರೈಲ್ವೆ ನಿಲ್ದಾಣದ ಒಳಗೆ ಪ್ರವೇಶ ಮಾಡಲು ಭಯಪಡುವಂತಾಗಿದೆ ಎಂದಿದ್ದಾರೆ. ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕೂರಲು ಆಸನದ ಕೊರತೆ ಇದೆ , ಸರಿಯಾದ ಆಸನಗಳ ವ್ಯವಸ್ಥೆಗಳಿಲ್ಲ ಎಂದು ಈ ಎಲ್ಲಾ ಮನವಿಗಳನ್ನು ರೈಲ್ವೆ ಅಧಿಕಾರಿಗಳಿಗೆ ಮತ್ತು ಮಾನ್ಯ ಸಂಸದರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೂ ಮನವಿ ಸಲ್ಲಿಸಲಾಯಿತು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ, ಗೌರವಾಧ್ಯಕ್ಷರಾದ ಸುಂದರ. ಎ. ಬಂಗೇರ. ಜಿಲ್ಲಾ ಕಾರ್ಯದರ್ಶಿ ಸಿದ್ದಣ್ಣ ಪೂಜಾರಿ. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗೋಪಾಲ ದೊರೆ ಮತ್ತು ಅಲ್ಫೋನ್ಸ್ ಜಿಲ್ಲಾ ಮಹಿಳಾ ಉಪಾಧ್ಯಕ್ಷರಾದ ದೇವಕಿ ಬಾರ್ಕೂರು. ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿಯಾದ ಜ್ಯೋತಿ. ಜಿಲ್ಲಾ ಮಹಿಳಾ ಕಾರ್ಯದರ್ಶಿ ಚಂದ್ರಕಲಾ. ಜಿಲ್ಲಾ ಸದಸ್ಯರಾದ ಅಶೋಕ್ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು ಎಂದು ತಿಳಿಸಿದ್ದಾರೆ.