ದಿನಾಂಕ :30/7/2024 (ಹಾಯ್ ಉಡುಪಿ ನ್ಯೂಸ್)
ಉಡುಪಿ ಜಿಲ್ಲೆಯಲ್ಲಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ತಾಂತ್ರಿಕ ಮಹಾವಿದ್ಯಾಲಯ ( ಇಂಜಿನಿಯರಿಂಗ್ ) ವನ್ನು ಸ್ಥಾಪಿಸ ಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕವು ಕಳೆದ 2020ನೇ ಇಸವಿಯಲ್ಲಿ ಮತ್ತು 2022ರಲ್ಲಿ ಅಧಿಕಾರದಲ್ಲಿದ್ದ ಸರ್ಕಾರದ ಮುಖ್ಯಮಂತ್ರಿಗಳಿಗೆ ಮನವಿಯನ್ನು ಮಾಡಿದ್ದರೂ ಕೂಡ ಇದುವರೆಗೂ ಎರಡು ಮಹಾ ವಿದ್ಯಾಲಯಗಳು ಉಡುಪಿ ಜಿಲ್ಲೆಗೆ ಮಂಜೂರು ಆಗಿಲ್ಲ ಇದು ಉಡುಪಿ ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಮಾಡಿದ ಅನ್ಯಾಯ ಎಂದು ಕರವೇ ಜಿಲ್ಲಾಧ್ಯಕ್ಷ ಸುಜಯ ಪೂಜಾರಿ ತಿಳಿಸಿದ್ದಾರೆ.
ನಿನ್ನೆ ದಿನಾಂಕ 29 /7/2024- ರಂದು ಉಡುಪಿ ಜಿಲ್ಲೆಯ ಕರವೇಯ ಜಿಲ್ಲಾಧ್ಯಕ್ಷರಾದ ಶ್ರೀ ಸುಜಯ್ ಪೂಜಾರಿ ಹಾಗೂ ಜಿಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಇದೀಗ ಮೂರನೇ ಬಾರಿಗೆ ಈಗಿನ ಕಾಂಗ್ರೆಸ್ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ವಿಷಯ ಬರುವಂತೆ ಉಡುಪಿ ಜಿಲ್ಲಾಧಿಕಾರಿಗಳಾದ ಡಾ. ಕೆ. ವಿದ್ಯಾಕುಮಾರಿ ಯವರ ಮೂಲಕ ಮನವಿಯನ್ನು ಸಲ್ಲಿಸಲಾಯಿತು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಅವರಿಗೂ ಸಹ ಮನವಿಯನ್ನು ಸಲ್ಲಿಸುವುದ ರೊಂದಿಗೆ ಶೀಘ್ರವಾಗಿ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಹಾಗೂ ತಾಂತ್ರಿಕ ಮಹಾವಿದ್ಯಾಲಯ ಸ್ಥಾಪನೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಯಾಕೆಂದರೆ ಉಡುಪಿ ಜಿಲ್ಲೆಯಾಗಿ 28 ವರ್ಷ ಕಳೆದರೂ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ತಾಂತ್ರಿಕ ಮಹಾವಿದ್ಯಾಲಯ ಸ್ಥಾಪನೆಯಾಗದಿರುವುದು ಉಡುಪಿ ಜಿಲ್ಲೆಗೆ ಬೇಸರದ ವಿಚಾರವಾಗಿದೆ ಇದರಿಂದ ಜಿಲ್ಲೆಯ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಪಡೆಯುವ ಆಸೆಗೆ ತಣ್ಣೀರು ಎರಚಿದಂತಾಗಿದೆ ಆದ್ದರಿಂದ ಶೀಘ್ರವಾಗಿ ಜಿಲ್ಲೆಯ ಬಹುವರ್ಷಗಳ ಬೇಡಿಕೆ ಈಡೇರಿಸಬೇಕು ಹಾಗೂ ಈ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕು ,ಉಡುಪಿ ಜಿಲ್ಲೆಯ ಪ್ರಜ್ಞಾವಂತ ಜನಪ್ರತಿನಿಧಿಗಳು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ತಾಂತ್ರಿಕ ಮಹಾ ವಿದ್ಯಾಲಯ ಸ್ಥಾಪಿಸುವ ಕೆಲಸಗಳು ಕಾರ್ಯರೂಪಕ್ಕೆ ತರಲು ಮುಂದೆ ಬರದಿದ್ದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಉಗ್ರ ಹೋರಾಟ ಮಾಡಲು ತಯಾರಾಗುತ್ತೇವೆ ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ .
ಈ ಸಂದರ್ಭದಲ್ಲಿ ಉಡುಪಿ ಕರವೇ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ,ಮಹಿಳಾ ಜಿಲ್ಲಾಧ್ಯಕ್ಷರಾದ ಗೀತಾ ಪಾಂಗಾಳ, ಮಹಿಳಾ ಉಪಾಧ್ಯಕ್ಷರಾದ ದೇವಕಿ ಬಾರ್ಕೂರ್, ಜಿಲ್ಲಾ ಕಾರ್ಯದರ್ಶಿಯಾದ ಸಿದ್ದಣ್ಣ ಎಸ್ ಪೂಜಾರಿ, ಜಿಲ್ಲಾ ಕಾರ್ಯದರ್ಶಿಯಾದ ಗಣೇಶ್. ಎಸ್ , ಸಂಘಟನಾ ಕಾರ್ಯದರ್ಶಿಯಾದ ಗೋಪಾಲ್ ದೊರೆ ಹಾಗೂ ಅಲ್ಫೋನ್ಸ್, ಸಾಂಸ್ಕೃತಿಕ ಕಾರ್ಯದರ್ಶಿಯಾದ ಕೃಷ್ಣಕುಮಾರ್, ಜಿಲ್ಲಾ ಸದಸ್ಯರಾದ ದೇವರಾಜ್ ದೊರೆ, ಅಶೋಕ್ ರಾವ್ ಉಪಸ್ಥಿತರಿದ್ದರು ಎಂದು ತಿಳಿಸಿದ್ದಾರೆ.