ದಿನಾಂಕ:05-08-2024 (ಹಾಯ್ ಉಡುಪಿ ನ್ಯೂಸ್)
ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಅಸಹಕಾರ ಚಳುವಳಿಯಿಂದ ಪ್ರತಿಭಟನಾಕಾರರು ಹಾಗೂ ಆಡಳಿತಾರೂಢ ಅವಾಮಿ ಲೀಗ್ ಪಕ್ಷದ ಬೆಂಬಲಿಗರ ನಡುವೆ ಘರ್ಷಣೆ ನಡೆದಿದ್ದು ಸುಮಾರು 100ಕ್ಕೂ ಅಧಿಕ ಮಂದಿ ಮ್ರತ ಪಟ್ಟಿದ್ದಾರೆ.
ಹಸೀನಾ ರಾಜೀನಾಮೆಗೆ ಒತ್ತಾಯಿಸಿ ದೇಶದ 13 ಜಿಲ್ಲೆಗಳಲ್ಲಿ ನಡೆಯುತ್ತಿರುವ ಅಸಹಕಾರ ಚಳವಳಿಯು ಘರ್ಷಣೆಯ ರೂಪ ಪಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಅಸಹಕಾರ ಚಳವಳಿಯು ಹಿಂಸಾಚಾರದ ರೂಪ ತಳೆದಿದ್ದು ಹಿಂಸಾಚಾರದ ಘಟನೆಗಳ ಬೆನ್ನಲ್ಲೇ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಸಲ್ಲಿಸಿ ದೇಶ ತೊರೆದಿದ್ದಾರೆ ಎಂದು ವರದಿಯಾಗಿದೆ. ಪ್ರತಿಭಟನಾಕಾರರು ಪ್ರಧಾನಿ ನಿವಾಸಕ್ಕೆ ನುಗ್ಗಿದ್ದಾರೆ ಎನ್ನಲಾಗಿದೆ.