ಮೈಸೂರು: ದಿನಾಂಕ:08-08-2024(ಹಾಯ್ ಉಡುಪಿ ನ್ಯೂಸ್)
ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಒಬ್ಬ ಹಿಂದುಳಿದ ವರ್ಗದ ನಾಯಕನ ತೇಜೋವಧೆಗೆ ಬಿಜೆಪಿ -ಜೆಡಿಎಸ್ ಹೊರಟಿರುವುದರಿಂದಾಗಿ ಇಡೀ ಪಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರ ಮಾರ್ಗದರ್ಶನದಲ್ಲಿ ಸಿದ್ದರಾಮಯ್ಯ ರವರ ಪರವಾಗಿ ನಿಂತಿದೆ ಎಂದು ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಶುಕ್ರವಾರ ಆಯೋಜಿಸಿರುವ ಕಾಂಗ್ರೆಸ್ ಜನಾಂದೋಲನ ವೇದಿಕೆಯನ್ನು ಪರಿಶೀಲಿಸಲು ಆಗಮಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದರು.
ಸಿದ್ದರಾಮಯ್ಯ ಅವರು ಭಾವನಾತ್ಮಕ ಜೀವಿ , ಕೆ.ಪಿ.ಸಿ.ಸಿ ಅಧ್ಯಕ್ಷ ನಾಗಿ ಸಿದ್ದರಾಮಯ್ಯ ರವರ ಪರವಾಗಿ ಬಂಡೆಯಂತೆ ನಿಲ್ಲುತ್ತೇನೆ.ಮುಂದೆಯೂ ಇರುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.